ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ಚೆನ್ನೈಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಚೆನ್ನೈನ ಹೆಚ್ಚಿನ ಭಾಗವು ಮುಳುಗಿದೆ. ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಾಗುವ ಸಾಧ್ಯತೆಯಿದೆ. ಚೆನ್ನೈನಲ್ಲಿ ತಗ್ಗು ಪ್ರದೇಶಗಳಿಂದ ಭಾರೀ ಪ್ರವಾಹ ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಮಂಗಳವಾರ ಬೆಳಿಗ್ಗೆವರೆಗೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಚಂಡಮಾರುತವು ಮಧ್ಯರಾತ್ರಿಯ ಸುಮಾರಿಗೆ ನೆಲ್ಲೂರು ನಡುವೆ ಸಾಗಿಬರುವ ನಿರೀಕ್ಷೆಯಿದೆ.
ಚೆನ್ನೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಬೆಳಗ್ಗೆಯಿಂದ ಮಳೆ ನಿರಂತವಾಗಿ ಸುರಿಯುತ್ತಿದೆ. ಚಂಡಮಾರುತದ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.
ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ 33 ವಿಮಾನಗಳನ್ನು ಚೆನ್ನೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವರ್ಗಾವಣೆ ಮಾಡಲಾಗಿದೆ.
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…
ವಿದ್ಯುತ್ ಸರಬರಾಜು ಕಂಪನಿಗಳಿಗೆ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …