ಬಂಗಾಳಕೊಲ್ಲಿಯಲ್ಲಿಉಂಟಾಗಿರುವ ಮೊಂತಾ ಚಂಡಮಾರುತವು ಆಂಧ್ರಪ್ರದೇಶ ಹಾಗೂ ಒರಿಸ್ಸಾ ಕರಾವಳಿ ಪ್ರದೇಶದತ್ತ ಧಾವಿಸುತ್ತಿದೆ. ಚಂಡಮಾರುತವು ಭಾರತದ ಪೂರ್ವ ಕರಾವಳಿಯತ್ತ ಲಗ್ಗೆ ಇಡಲು ಸಜ್ಜಾಗಿದೆ. ಭಾರತೀಯ ಹವಮಾನ ಇಲಾಖೆ ಪ್ರಕಾರ, ನಾಳೆ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕಾಕಿನಾಡ ಬಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಬೆಂಗಳೂರು ಹಾಗೂ ಆಂಧ್ರಪ್ರದೇಶಕ್ಕೆ ಪೊಂದಿಕೊಂಡಿರುವ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆಂಧ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಾದ ಕಾಕಿನಾಡ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂನಲ್ಲಿ ಚಂಡಮಾರುತದ ಪರಿಣಾಮ ಭೀಕರವಾಗಿರಬಹುದು. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿ ಭಾಗಗಳಿಗೆ ಹತ್ತಿರದಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಗಳು ದಟ್ಟವಾಗಿವೆ. ಉದಾಹರಣೆಗೆ, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಹೀಗೆ ಗಡಿಯಲ್ಲಿರುವ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

