Advertisement
MIRROR FOCUS

ಮೊಂತಾ ಚಂಡಮಾರುತ | ಅ.29 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ

Share

ಬಂಗಾಳಕೊಲ್ಲಿಯಲ್ಲಿಉಂಟಾಗಿರುವ ಮೊಂತಾ ಚಂಡಮಾರುತವು ಆಂಧ್ರಪ್ರದೇಶ ಹಾಗೂ ಒರಿಸ್ಸಾ ಕರಾವಳಿ ಪ್ರದೇಶದತ್ತ ಧಾವಿಸುತ್ತಿದೆ. ಚಂಡಮಾರುತವು ಭಾರತದ ಪೂರ್ವ ಕರಾವಳಿಯತ್ತ ಲಗ್ಗೆ ಇಡಲು ಸಜ್ಜಾಗಿದೆ. ಭಾರತೀಯ ಹವಮಾನ ಇಲಾಖೆ ಪ್ರಕಾರ, ನಾಳೆ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕಾಕಿನಾಡ ಬಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ.   ಬೆಂಗಳೂರು ಹಾಗೂ ಆಂಧ್ರಪ್ರದೇಶಕ್ಕೆ ಪೊಂದಿಕೊಂಡಿರುವ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು  ಹವಾಮಾನ ಇಲಾಖೆ ಹೇಳಿದೆ.

ಆಂಧ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಾದ ಕಾಕಿನಾಡ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂನಲ್ಲಿ ಚಂಡಮಾರುತದ ಪರಿಣಾಮ ಭೀಕರವಾಗಿರಬಹುದು. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿ ಭಾಗಗಳಿಗೆ ಹತ್ತಿರದಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಗಳು ದಟ್ಟವಾಗಿವೆ. ಉದಾಹರಣೆಗೆ, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಹೀಗೆ ಗಡಿಯಲ್ಲಿರುವ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

9 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

14 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

18 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago