Advertisement
MIRROR FOCUS

ಮೋಂಥಾ ಚಂಡಮಾರುತ | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Share

ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.  ಮೋಂಥಾ ಚಂಡಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.  ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣವಿದ್ದು ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ.  ಚಿಕ್ಕಮಗಳೂರು, ಮೂಡಿಗೆರೆ , ತರೀಕೆರೆ ತಾಲೂಕು ಸೇರಿ ಹಲವೆಡೆ ಸಾಧಾರಣ ಮಳೆ ಮುಂದುವರೆದಿದೆ. ನಿರಂತರ ಮಳೆಯ ಕಾರಣ ಜಿಲ್ಲೆಯ ಕಾಫಿ, ಅಡಿಕೆ, ತರಕಾರಿ ಬೆಳೆಗಳಿಗೆ ಹಾನಿಯುಂಟಾಗಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಕೆಮ್ಮಣುಗುಂಡಿ, ಮಲ್ಲೇನಹಳ್ಳಿ ಸುತ್ತ ಮುತ್ತಲಿನ ಕೆಲ ತೋಟಗಳಲ್ಲಿ ಮಳೆಯಿಂದ ಕಾಫಿಗೆ ಕೊಳೆ ರೋಗ ಕಂಡುಬಂದಿದೆ. ಹಲವೆಡೆ ಕಾಫಿ ಕಾಯಿಗಳು ನೆಲಕ್ಕುದುರಿವೆ.

ಮೋಂಥಾ ಚಂಡಮಾರುತದ ಅಬ್ಬರ ತೀವ್ರಗೊಂಡಿದೆ.  ಆಂಧ್ರಪ್ರದೇಶದ ಕರಾವಳಿಯ ಕಾಕಿನಾಡದಲ್ಲಿ  ಚಂಡಮಾರುತದ ಕೇಂದ್ರಬಿಂದು ಕಂಡುಬಂದಿದೆ. ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೆ, ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನಲ್ಲಿಯೂ  ಭಾರೀ ಮಳೆ ನಿರೀಕ್ಷಿಸಲಾಗಿದೆ.  ತಮಿಳುನಾಡಿನ  ತಿರುವೆಲ್ಲೂರ್, ಚೆನ್ನೈ, ರಾಣಿಪೆತ್, ಕಂಚೀಪುರಂ, ಚಂಗಲ್ ಪಟ್ಟು,  ವಿಲ್ಲುಪುರಂ ಜಿಲ್ಲೆಗಳಲ್ಲಿ  ಭಾರೀ ಗಾಳಿಯಿಂದಾಗಿ ಮಳೆಯಾಗುವ ನಿರೀಕ್ಷೆ ಇದೆ.   ರಾಜ್ಯದ 11 ಜಿಲ್ಲೆಗಳಲ್ಲಿ  ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಉಡುಪಿ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ . ಬೀದರ್, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್  ಘೋಷಿಸಲಾಗಿದೆ.   ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

10 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

14 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

18 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago