ಈಶಾನ್ಯ ರಾಜ್ಯಗಳಲ್ಲಿ ಆರ್ಭಟಿಸುತ್ತಿರುವ ರೆಮಲ್‌ ಚಂಡಮಾರುತ | 37ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ | ಎಲ್ಲೆಲ್ಲಿ ಎಷ್ಟು ಹಾನಿಯಾಗಿದೆ..?

May 29, 2024
11:24 AM

ಮುಂಗಾರು ಪೂರ್ವ ಮಳೆ(Pre Mansoon rain) ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ಕೆಲ ಭಾಗಗಳಲ್ಲಿ ಆವಾಂತರ ಸೃಷ್ಟಿಸುತ್ತಿದೆ. ಈ ಮಧ್ಯೆ ವಾಯುಭಾರ ಕುಸಿತ ಹಿನ್ನೆಲೆ ರೆಮಲ್ ಚಂಡಮಾರುತದಿಂದ (Remal Cyclone) ಉಂಟಾದ ಭಾರೀ ಮಳೆಗೆ(Rain) ಮಿಜೋರಾಂ(Mizoram) ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ(Death). ಹತ್ತಾರು ಜನರು ನಾಪತ್ತೆಯಾಗಿದ್ದಾರೆ. ಮಳೆಯಿಂದ ಮನೆಗಳು ಧ್ವಂಸಗೊಂಡು ವಿದ್ಯುತ್ ತಂತಿಗಳು ನೆಲಕ್ಕುರುಳಿವೆ. ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ(Camp) ಆಶ್ರಯ ಪಡೆಯುವಂತಾಗಿದೆ. ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ.

Advertisement

ರೆಮಲ್ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್‌ನ ಮೆಲ್ತಮ್, ಹ್ಲಿಮೆನ್, ಫಾಲ್ಕಾವ್ನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪರಿಹಾರ ತಂಡಗಳು ಇದುವರೆಗೆ 27 ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದು, ನಗರದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಲಾಲ್ದುಹೋಮ ಅವರು, ಮೃತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್) 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಅಸ್ಸಾಂನಲ್ಲಿ ಶಾಲಾ ಬಸ್‌ ಮೇಲೆ ಬಿದ್ದ ಮರ : ಚಂಡಮಾರುತದ ನಂತರ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಅಸ್ಸಾಂನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು 12 ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯು ನಾಗಾಲ್ಯಾಂಡ್‌ನಲ್ಲಿ ನಾಲ್ಕು ಜೀವಗಳನ್ನು ಬಲಿ ತೆಗೆದುಡಿದೆ. 40 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ರಾಜ್ಯದ ಅತ್ಯಂತ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಾಲಯದಲ್ಲಿ ಭಾರೀ ಮಳೆ ಸುರಿದು ಇಬ್ಬರು ಸಾವನ್ನಪ್ಪಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಜೈನ್ತಿಯಾ ಹಿಲ್ಸ್‌ನಲ್ಲಿ ಒಂದು ಸಾವು ಮತ್ತು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ಮತ್ತೊಂದು ಸಾವು ವರದಿಯಾಗಿದೆ. ಈ ಮೂಲಕ ಈಶಾನ್ಯ ರಾಜ್ಯಗಳಲ್ಲಿ ಒಟ್ಟು ಸಾವಿನ ಸಂಖ್ಯೆ 37ಕ್ಕೆ ಏರಿದೆ.

ತ್ರಿಪುರಾದಲ್ಲಿ ಕತ್ತಲೆಯಲ್ಲಿ ಲಕ್ಷಾಂತರ ಜನ : ತ್ರಿಪುರಾದಿಂದ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲವಾದರೂ, ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ 246 ಕುಟುಂಬಗಳ ಒಟ್ಟು 746 ಜನರು ರಾಜ್ಯದ ವಿವಿಧ ಭಾಗಗಳಲ್ಲಿ ತೆರೆಯಲಾದ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಚಂಡಮಾರುತದಿಂದ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದಲ್ಲಿ ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ಭೂಕುಸಿತ ಉಂಟಾಗಿದೆ. ಕರಾವಳಿಯಾದ್ಯಂತ ಗಾಳಿಯ ವೇಗ ಗಂಟೆಗೆ 135 ಕಿ.ಮೀ. ಇದೆ. ವಿದ್ಯುತ್‌ ಸ್ಥಗಿತದಿಂದಾಗಿ ಲಕ್ಷಾಂತರ ಜನ ಪರದಾಡುವಂತಾಯಿತು.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group