ಮುಂಗಾರು ಪೂರ್ವ ಮಳೆ(Pre Mansoon rain) ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ಕೆಲ ಭಾಗಗಳಲ್ಲಿ ಆವಾಂತರ ಸೃಷ್ಟಿಸುತ್ತಿದೆ. ಈ ಮಧ್ಯೆ ವಾಯುಭಾರ ಕುಸಿತ ಹಿನ್ನೆಲೆ ರೆಮಲ್ ಚಂಡಮಾರುತದಿಂದ (Remal Cyclone) ಉಂಟಾದ ಭಾರೀ ಮಳೆಗೆ(Rain) ಮಿಜೋರಾಂ(Mizoram) ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ(Death). ಹತ್ತಾರು ಜನರು ನಾಪತ್ತೆಯಾಗಿದ್ದಾರೆ. ಮಳೆಯಿಂದ ಮನೆಗಳು ಧ್ವಂಸಗೊಂಡು ವಿದ್ಯುತ್ ತಂತಿಗಳು ನೆಲಕ್ಕುರುಳಿವೆ. ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ(Camp) ಆಶ್ರಯ ಪಡೆಯುವಂತಾಗಿದೆ. ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ.
ರೆಮಲ್ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್‌ನ ಮೆಲ್ತಮ್, ಹ್ಲಿಮೆನ್, ಫಾಲ್ಕಾವ್ನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪರಿಹಾರ ತಂಡಗಳು ಇದುವರೆಗೆ 27 ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದು, ನಗರದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಲಾಲ್ದುಹೋಮ ಅವರು, ಮೃತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್) 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಅಸ್ಸಾಂನಲ್ಲಿ ಶಾಲಾ ಬಸ್ ಮೇಲೆ ಬಿದ್ದ ಮರ : ಚಂಡಮಾರುತದ ನಂತರ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಅಸ್ಸಾಂನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು 12 ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತ್ರಿಪುರಾದಲ್ಲಿ ಕತ್ತಲೆಯಲ್ಲಿ ಲಕ್ಷಾಂತರ ಜನ : ತ್ರಿಪುರಾದಿಂದ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲವಾದರೂ, ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ 246 ಕುಟುಂಬಗಳ ಒಟ್ಟು 746 ಜನರು ರಾಜ್ಯದ ವಿವಿಧ ಭಾಗಗಳಲ್ಲಿ ತೆರೆಯಲಾದ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಚಂಡಮಾರುತದಿಂದ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದಲ್ಲಿ ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ಭೂಕುಸಿತ ಉಂಟಾಗಿದೆ. ಕರಾವಳಿಯಾದ್ಯಂತ ಗಾಳಿಯ ವೇಗ ಗಂಟೆಗೆ 135 ಕಿ.ಮೀ. ಇದೆ. ವಿದ್ಯುತ್ ಸ್ಥಗಿತದಿಂದಾಗಿ ಲಕ್ಷಾಂತರ ಜನ ಪರದಾಡುವಂತಾಯಿತು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…