ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹದ ಭೀತಿ ಎದುರಾದರೂ ಜನರು ರಕ್ಷಣಾ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಕೊರೋನಾ ಈ ಪ್ರದೇಶದಲ್ಲಿ ವ್ಯಾಪಕವಾಗಿರುವುದರಿಂದ ಇನ್ನಷ್ಟು ಭಯದ ವಾತಾವರಣ ಜನರಲ್ಲಿದೆ.
ಗುರುವಾರ ಬೆಳಗ್ಗಿನಿಂದಲೇ ಚೆಲ್ಲಾನಂ ಪ್ರದೇಶದಲ್ಲಿ ಗಾಳಿ ಹಾಗೂ ಮಳೆಯಾಗುತ್ತಿದೆ. ಹೀಗಾಗಿ ಸಮುದ್ರ ಕೊರತೆ ಉಂಟಾಗಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆ ಮತ್ತು ಸಮುದ್ರ ಕೊರೆತದಿಂದಾಗಿ, ಗ್ರಾಮದ ಅನೇಕ ಮನೆಗಳು ನೀರಿನಿಂದ ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಜಿಲ್ಲಾಡಳಿತವು ಸ್ಥಳೀಯ ಶಾಲೆಯಲ್ಲಿ ಪರಿಹಾರ ಕೇಂದ್ರವನ್ನು ತೆರೆದಿದೆ.
ಆದರೆ ಸ್ಥಳೀಯ ಜನರು ಕೊರೋನಾ ಪ್ರಕರಣಗಳಿಂದಾಗಿ ಈ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ 4000 ಕ್ಕೂ ಅಧಿಕ ಕೊರೋನಾ ಪ್ರಕರಣ ಇರುವುದರಿಂದ ಜನರು ಕೊರೋನಾ ವೈರಸ್ ಹರಡುವ ಭೀತಿಗೊಂಡಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…