ಟೌಕ್ಟೇ ಚಂಡಮಾರುತ ತನ್ನ ಪ್ರಭಾವವನ್ನು ಹೆಚ್ಚಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತದ ಕಾರಣದಿಂದ ಮಳೆಯಾಗುತ್ತಿದೆ. ಚಂಡಮಾರುತದ ಪ್ರಭಾವಕ್ಕೆ ಸಿಕ್ಕಿ ಪಡುಬಿದ್ರಿ ಬಳಿ ಬೋಟ್ ಪಲ್ಟಿಯಾಗಿ ಒಬ್ಬ ಮೃತಪಟ್ಟು 5 ಜನ ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ಪಡುಬಿದ್ರಿಯಲ್ಲಿ ನಡೆದಿದೆ.
ಕೇರಳದಲ್ಲಿ ಭಾರೀ ಅವಾಂತರ ಸೃಷ್ಟಿ ಮಾಡಿದ ಚಂಡಮಾರುತ ಕರಾವಳಿ ಜಿಲ್ಲೆಯಾದ್ಯಂತ ಪ್ರಭಾವ ಉಂಟು ಮಾಡಿದೆ. ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಸಮುದ್ರ ಪಾಲಾದ ಬೋಟು ಪಡುಬಿದ್ರಿ ಕಾಡಿಪಟ್ನ ಸಮುದ್ರ ತೀರದಲ್ಲಿ ಬಂದು ದಡಕ್ಕೆ ಅಪ್ಪಳಿಸಿದೆ. ಬೋಟಿನಲ್ಲಿ 8 ಜನರಿದ್ದು 2 ಜನ ಈಜಿಕೊಂಡು ಮಟ್ಟು ಬೀಚಿನಲ್ಲಿ ದಡ ಸೇರಿದ್ದಾರೆ. ಒಂದು ಮೃತ ದೇಹ ಪತ್ತೆಯಾಗಿದ್ದು, ಕಾಣೆಯಾದ ಐವರಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ಇನ್ನೂ ಹೆಚ್ಚಿನ ತೀವ್ರತೆ ಪಡೆಯಲಿದೆ. ಭಾನುವಾರ ವೇಳೆಗೆ ಕರಾವಳಿ ಭಾಗದಲ್ಲೂ ಹೆಚ್ಚಿನ ಗಾಳಿ ಮಳೆಯಾಗಲಿದೆ. ಮೇ 18 ರ ಸುಮಾರಿಗೆ ಪೋರಬಂದರ್ ಮತ್ತು ನಲಿಯಾ ನಡುವೆ ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಕೇರಳ ಜಿಲ್ಲೆಗಳಲ್ಲಿ ಮತ್ತು ಲಕ್ಷದ್ವೀಪದಲ್ಲಿ ರೆಡ್ ಎಲರ್ಟ್ ನೀಡಲಾಗಿದ್ದು , ಮೇ 16 ರಂದು ಕರ್ನಾಟಕ ಕರಾವಳಿ, ಕೊಂಕಣ ಪ್ರದೇಶ ಮತ್ತು ಗೋವಾದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಸದ್ಯ ಚಂಡಮಾರುತವು ತೀವ್ರಗೊಂಡಿದ್ದು ಗುಜರಾತ್ ಕರಾವಳಿ ಮತ್ತು ಕೇಂದ್ರ ಪ್ರದೇಶವಾದ ಡಿಯು ಮತ್ತು ದಮನ್ ಮತ್ತು ದಾದ್ರಾ , ಹವೇಲಿ ಕಡೆಗೆ ಸಾಗುತ್ತಿದೆ ಎಂದು ಭಾರತ ಹವಾಮಾನ ಇಲಾಖೆ ಶನಿವಾರ ಸಂಜೆ ತಿಳಿಸಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…