Advertisement
ಸುದ್ದಿಗಳು

ಟೌಕ್ಟೇ ಚಂಡಮಾರುತ | ಗುಜರಾತ್‌ ಕರಾವಳಿಗೆ ಅಪ್ಪಳಿಸಿತು ರಣ ಭೀಕರ ಚಂಡಮಾರುತ | 2 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ |

Share

ಚಂಡಮಾರುತ ಟೌಕ್ಟೇ ಗುಜರಾತ್‌ ಕರಾವಳಿ ಭಾಗದಲ್ಲಿ  ಅಪ್ಪಳಿಸಿದೆ. ಕಳೆದ  4  ದಿನಗಳಿಂದ ಅರಬೀ ಸಮುದ್ರದ ಕರಾವಳಿ ಭಾಗದಲ್ಲಿ  ಹಾದು ಹೋದ ಟೌಕ್ಟೇ ಚಂಡಮಾರುತ ಅಬ್ಬರದೊಂದಿಗೆ ಗುಜರಾತ್‌ ಕರಾವಳಿ ಭಾಗದಲ್ಲಿ ಅಪ್ಪಳಿಸಿದೆ. ಸುಮಾರು 150  ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಅಬ್ಬರದ ಮಳೆಯೂ ಆರಂಭವಾಗಿದೆ.

ಚಂಡಮಾರುತವು ಗುಜರಾತ್ ಕರಾವಳಿಗೆ ಅಪ್ಪಳಿಸಲು ಆರಂಭವಾಗಿ ಸುಮಾರು 4 ಗಂಟೆಗಳ ಕಾಲ ಅಬ್ಬರವನ್ನು  ಪ್ರದರ್ಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸುಮಾರು 155-165 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಗುಜರಾತ್‌ ದಾಟಿ ಮುಂದೆ ಸಾಗಲಿದೆ ಈ ಸಂದರ್ಭ ತನ್ನ ಪ್ರಭಾವನ್ನು ಕಡಿಮೆ ಮಾಡಬಹುದು. ರಾತ್ರಿಯ ಸಮಯದಲ್ಲಿ ಪೋರಬಂದರ್‌ ಮತ್ತು ಮಹುವಾ ನಡುವೆ  ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ  ಅತ್ಯಂತ ತೀವ್ರವಾದ ಚಂಡಮಾರುತ ಇದಾದ ಕಾರಣ ಗುಜರಾತ್ ಸರ್ಕಾರವು ಕರಾವಳಿ ಪ್ರದೇಶದ 18 ಜಿಲ್ಲೆಗಳಿಂದ 2 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ.

ಈಗಾಗಲೇ ಗಾಳಿಯ ರಭಸ ಹೆಚ್ಚಿರುವುದರಿಂದ ರಸ್ತೆಗೆ ಮರಗಳು ಉರುಳಿ ಬಿದ್ದಿವೆ. ವಿದ್ಯುತ್‌ ಸಂಪರ್ಕಗಳು ಕಡಿತಗೊಂಡಿವೆ.  ಮೊಬೈಲ್ ನೆಟ್‌ವರ್ಕ್‌ಗಳು ಸ್ಥಗಿತಗೊಂಡಿವೆ.

ಚಂಡಮಾರುತವು ಕೇರಳದಿಂದಲೇ ಅನಾಹುತ ಸೃಷ್ಟಿ ಮಾಡುತ್ತಲೇ ಬಂದಿದ್ದು ಕರ್ನಾಟಕದ ಉಡುಪಿಯ ಪಡುಬಿದ್ರಿ ಬಳಿ ಬೋಟ್‌ ಪಲ್ಟಿಯಾದರೆ ಕರಾವಳಿ ಪೂರ್ತಿ ಸಮುದ್ರ ಕೊರತ ಕಂಡುಬಂದಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ತೀವ್ರ ಚಂಡಮಾರುತಕ್ಕೆ  ಪ್ರತ್ಯೇಕ ಘಟನೆಗಳಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡು ದೋಣಿಗಳು ಸಮುದ್ರದಲ್ಲಿ ಮುಳುಗಿದ ನಂತರ ಮೂವರು ನಾವಿಕರು ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಗುಜರಾತ್ ಕರಾವಳಿಯ ಕಡೆಗೆ ಹೋಗುವ ಮೊದಲು ಚಂಡಮಾರುತವು ಮುಂಬೈ ನಗರ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಗಾಳಿ ಮತ್ತು ಭಾರೀ ಮಳೆಯಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

4 minutes ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

17 minutes ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

20 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

20 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

20 hours ago