ಕೇಂದ್ರದ ಮಾಜಿ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಹೋಲುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಈ ಬಗ್ಗೆ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ, ಈ ವಿಡಿಯೋದಲ್ಲಿರುವುದು ನಾನಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಆತ್ಮೀಯ ಹಿತೈಷಿಗಳೇ,
ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ. 1/3
— Sadananda Gowda (@DVSadanandGowda) September 19, 2021
ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. pic.twitter.com/fUKacLiY99
— Sadananda Gowda (@DVSadanandGowda) September 19, 2021
ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ಮುಖದಂತೆ ಕಾಣುವಂತೆ ಮಾರ್ಫ್ ಮಾಡಲಾಗಿದೆ, ಇದೊಂದು ಕುತಂತ್ರ. ಈ ವಿಡಿಯೋದಲ್ಲಿರುವುದು ನಾನಲ್ಲ ಇಂತಹ ವಿಡಿಯೋಗಳನ್ನು ಯಾವುದೇ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಳ್ಳುವುದು , ಅಪ್ಲೋಡ್, ಫಾರ್ವಡ್ ಮಾಡುವುದು ಶಿಕ್ಷಾರ್ಹವಾಗಿದೆ. ಇಂತಹ ಕೃತ್ಯ ಎಸಗಿದವರ ಬಗ್ಗೆ ನನಗೆ ತಿಳಿಸಿ, ನನ್ನ ವಿರುದ್ಧ ಮಾನಹಾನಿ ಲೇಖನ ಪ್ರಕಟಿಸುವುದಕ್ಕೂ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.