ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ವಿಡಿಯೋ | ಡಿ ವಿ ಸದಾನಂದ ಗೌಡರಿಂದ ಸೈಬರ್ ಕ್ರೈಂ ಪೊಲೀಸರಿಗೆ ದೂರು | ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿ – ಡಿ ವಿ ಸದಾನಂದ ಗೌಡ ಹೇಳಿಕೆ |

September 19, 2021
10:50 PM

ಕೇಂದ್ರದ ಮಾಜಿ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಹೋಲುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್‌ ಆಗುತ್ತಿದ್ದು ಈ ಬಗ್ಗೆ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ  ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ, ಈ ವಿಡಿಯೋದಲ್ಲಿರುವುದು ನಾನಲ್ಲ ಎಂದು ಟ್ವೀಟ್  ಮೂಲಕ ತಿಳಿಸಿದ್ದಾರೆ.

ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಸದಾನಂದ ಗೌಡ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ಮುಖದಂತೆ ಕಾಣುವಂತೆ ಮಾರ್ಫ್ ಮಾಡಲಾಗಿದೆ, ಇದೊಂದು ಕುತಂತ್ರ. ಈ ವಿಡಿಯೋದಲ್ಲಿರುವುದು ನಾನಲ್ಲ ಇಂತಹ ವಿಡಿಯೋಗಳನ್ನು ಯಾವುದೇ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಳ್ಳುವುದು , ಅಪ್ಲೋಡ್, ಫಾರ್ವಡ್ ಮಾಡುವುದು ಶಿಕ್ಷಾರ್ಹವಾಗಿದೆ. ಇಂತಹ ಕೃತ್ಯ ಎಸಗಿದವರ ಬಗ್ಗೆ ನನಗೆ ತಿಳಿಸಿ, ನನ್ನ ವಿರುದ್ಧ ಮಾನಹಾನಿ ಲೇಖನ ಪ್ರಕಟಿಸುವುದಕ್ಕೂ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror