ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಸಾವು- ನೋವು | ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ | ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

October 20, 2023
11:23 PM
ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ.

ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್-ಹಮಾಸ್ ಕದನ ಪಶ್ಚಿಮ ಏಷ್ಯಾದ ಶಾಂತಿ ಕದಡುವಂತೆ ಕಾಣ್ತಿದೆ. ಇಸ್ರೇಲ್ ಬೆಂಬಲಕ್ಕೆ ನಿಂತ ಅಮೆರಿಕ ವಿರುದ್ಧ ಅರಬ್ ದೇಶಗಳು ಸಿಡಿದೇಳುತ್ತಿವೆ. ಇರಾಕ್‌ನ ಬಾಗ್ದಾದ್‌ನಲ್ಲಿರುವ ಅಮೆರಿಕ ಸೇನಾ ಶಿಬಿರದ ಮೇಲೆ ರಾಕೆಟ್‌ಗಳು ಹಾರಿವೆ.

ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್‌ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror