4.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದೊಂದಿಗೆ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಅಧಿಕ ಉಷ್ಣಾಂಶ ಹಾಗೂ ಸೆಕೆ ಮುಂದುವರಿಯಲಿದೆ. ಈಗಿನಂತೆ ಮಾರ್ಚ್ 6 ರಂದು ದ. ಕ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ನಂತರ ಮಾರ್ಚ್ 10 ರ ವರೆಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಗಲು ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 6 ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಕಾಣುಸುತ್ತಿರುವ ತಿರುಗುವಿಕೆಯು ಮತ್ತೂ ದಕ್ಷಿಣಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಯಾವುದೇ ರೀತಿಯ ಪರಿಣಾಮಗಳಿಲ್ಲ.
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…