ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ 2024-25 ನೇ ಸಾಲಿನ ವಿಸ್ತರಣಾ ಚಟುವಟಿಕೆಗಳ ಹಾಗೂ ಪಶುವೈದ್ಯಕೀಯ ಸಿಬ್ಬಂದಿಯವರ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು.ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. 21 ನೇ ಜಾನುವಾರು ಗಣತಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು.
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…