ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರವು ಮಾಸಾಶನ ನೀಡಲಿ ಮುಂದಾಗಿದೆ. 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ. ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ. ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel