Advertisement
MIRROR FOCUS

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಕೆಲವು ಕಡೆ ಶನಿವಾರ ಬೆಳಗ್ಗೆ ತುಂತುರು ಮಳೆಯಾಗಿತ್ತು.  ಮಧ್ಯಾಹ್ನ ನಂತರ ಹವಾಮಾನದಲ್ಲಿ  ಬದಲಾವಣೆ ಕಂಡುಬಂದಿದ್ದು, ಹಲವೆಡೆ ಸಿಡಿಲು-ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುತ್ತಿದೆ. ವಿಶೇಷವಾಗಿ ಮಲೆನಾಡು  ಹೊಂದಿಕೊಂಡ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ಕೆಲವೆಡೆ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿದೆ.

ಮಧ್ಯಾಹ್ನದ ಬಿಸಿಲಿನ ತೀವ್ರತೆ ನಂತರ ವಾತಾವರಣದಲ್ಲಿ ತೇವಾಂಶ ಹೆಚ್ಚಾದ ಪರಿಣಾಮ ಸಂಜೆ ವೇಳೆಗೆ ಗುಡುಗು ಮೋಡಗಳು ವೇಗವಾಗಿ ವೃದ್ಧಿಯಾಗುತ್ತಿವೆ. ಕೆಲ ಭಾಗಗಳಲ್ಲಿ ಗಾಳಿ ಸಹ ಕಂಡುಬಂದಿದೆ ಎಂದು ಕೃಷಿಕರು ಹೇಳಿದ್ದಾರೆ.  ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನೊಂದೆಡೆ, ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುತ್ತಿದೆ. ಮೂಡಿಗೆರೆ, ಕೊಪ್ಪ, ಕಳಸ ಸುತ್ತಮುತ್ತ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ ಎಂಬ ಮಾಹಿತಿ ಇದೆ.

ಹವಾಮಾನ ವೀಕ್ಷಕರ ಪ್ರಕಾರ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಂಜೆ ಹಾಗೂ ರಾತ್ರಿ ವೇಳೆ ಇಂತಹ ಗುಡುಗು ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ. ಕೆಲವು ಕಡೆ ಸಿಡಿಲು ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಾಗ್ರತೆ ಅಗತ್ಯವಾಗಿದೆ.

Thunderstorm activity has intensified across parts of Coastal and Malnad Karnataka. Moderate rain accompanied by lightning and gusty winds was reported in Sullia, Puttur, Belthangady and Kasaragod border areas of Dakshina Kannada district, while several parts of Chikkamagaluru district also received thunder

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

7 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

15 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago