Advertisement
ಪ್ರಮುಖ

ಷೇರು ಮಾರುಕಟ್ಟೆಗೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ಎಂಟ್ರಿ | ನೀವು ಷೇರು ಖರೀದಿಸಬೇಕೆ..? ಹೀಗೆ ಮಾಡಿ..

Share

ಷೇರು ಮಾರುಕಟ್ಟೆ(Share Marketing) ಏನಿದ್ದರೂ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾತ್ರ, ಅಂತ ಭಾವಿಸಿಕೊಂಡವರು ಅನೇಕರು. ಆದರೆ ಇದನ್ನು ಸುಳ್ಳಾಗಿಸಿದೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ತೆಂಗು ಬೆಳೆಗಾರರು (Coconut Farming) ಮುನ್ನಡೆಸುತ್ತಿರುವ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಈ ಕಂಪನಿ ಸಾರ್ವಜನಿಕರಿಂದ(Publics) ಷೇರು ಸಂಗ್ರಹಕ್ಕೆ ಮುಂದಾಗಿದೆ. ಹೌದು, ತಮ್ಮ ಕಂಪೆನಿಯ(Company) ವಿಸ್ತಾರಕ್ಕೆ ಮುಂದಾಗಿರುವ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

ಯಾಕಾಗಿ ಈ ಯೋಜನೆ? :15 ಸಾವಿರಕ್ಕೂ ಹೆಚ್ಚು ಸದಸ್ಯರು ಇರುವ ಕಂಪನಿ ₹300 ಕೋಟಿ ಮೊತ್ತ ತೊಡಗಿಸಿಕೊಳ್ಳುವ ಯೋಜನೆ ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ₹50 ಕೋಟಿ ಮೌಲ್ಯದ ಷೇರು ಸಂಗ್ರಹಿಸುವ ಗುರಿ ಹೊಂದಿದೆ. ₹ 1 ಸಾವಿರ ಮೌಲ್ಯವನ್ನು ಪ್ರತಿ ಷೇರಿಗೆ ನಿಗದಿ ಮಾಡಲಾಗಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕುಸುಮಾಧರ ಎಸ್.ಕೆ. ತಿಳಿಸಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ. ಷೇರುದಾರನೊಬ್ಬ ಗರಿಷ್ಠ 200 ಷೇರು ಖರೀದಿಸುವ ಅವಕಾಶವಿದೆ. ಈ ಯೋಜನೆಯ ಮೊದಲ ಹಂತ ಪೂರ್ಣಗೊಂಡಾಗ 300 ಮಂದಿಗೆ ನೇರ ಹಾಗೂ 600ಕ್ಕೂ ಅಧಿಕ ಮಂದಿಗೆ ಪರೋಕ್ಷವಾಗಿ ಉದ್ಯೋಗ ದೊರೆಯಲಿದೆ.

ಹೇಗೆ ಖರೀದಿಸಬಹುದು? : ಹೂಡಿಕೆದಾರರು ಕಂಪನಿಯ ಶಾಖೆಗಳಿಂದ ಷೇರುಗಳನ್ನು ಆನ್‌ಲೈನ್‌ ಮೂಲಕ ಖರೀದಿಸಬಹುದಾಗಿದೆ. ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಖರೀದಿಗೆ ಅವಕಾಶ ನೀಡಲಾಗಿದೆ. ಇಲ್ಲವೇ, ದೂರವಾಣಿ ಸಂಖ್ಯೆ 8105487763 ಮತ್ತು ಟೋಲ್‌ ಫ್ರೀ ಸಂಖ್ಯೆ 18002030129 ಮೂಲಕ ಕರೆ ಮಾಡಿಯೂ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

Dakshina Kannada coconut farmer producer company led by coconut farmers of Dakshina Kannada district. This company is going to collect shares from the public. Yes, the board of directors has come to this decision for the expansion of their company.

Source : Prajavani

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

11 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago