ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

July 18, 2026
8:10 PM
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಜುಲೈ 31ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಬ್ಯಾಂಕ್, ಸಿಎಸ್‌ಸಿ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ರೈತರು ನೋಂದಾಯಿಸಿಕೊಳ್ಳಬಹುದು.

ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆಗಳಿಗೆ ಉಂಟಾಗುವ ನಷ್ಟಕ್ಕೆ ಪರಿಹಾರ ಒದಗಿಸುವ ಉದ್ದೇಶದಿಂದ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ.

Advertisement

ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಪಡೆಯದ ರೈತರು ಇಬ್ಬರೂ ನೋಂದಾಯಿಸಿಕೊಳ್ಳಬಹುದು. ಬೆಳೆ ಸಾಲ ಪಡೆದಿರುವ ರೈತರು ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್‌ನಲ್ಲಿ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಉಳಿತಾಯ ಖಾತೆ ಇರುವ ಬ್ಯಾಂಕ್‌ನಲ್ಲಿ ನೋಂದಣಿ ಮಾಡಿಸಬಹುದು. ಇದರ ಜೊತೆಗೆ ಸಾಮಾನ್ಯ ಸೇವಾ ಕೇಂದ್ರ (CSC) ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿಯೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

Advertisement

ಯೋಜನೆಯಡಿ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಅಡಿಕೆಗೆ ಪ್ರತಿ ಹೆಕ್ಟೇರಿಗೆ ₹6,400 ಹಾಗೂ ಕಾಳುಮೆಣಸಿಗೆ ಪ್ರತಿ ಹೆಕ್ಟೇರಿಗೆ ₹2,350 ನಿಗದಿಪಡಿಸಲಾಗಿದೆ.

2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನಾಂಕವಾಗಿದೆ. ರೈತರು ಕೊನೆಯ ಕ್ಷಣದವರೆಗೆ ಕಾಯದೆ ಶೀಘ್ರ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆಯುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Advertisement

ಟಾಟಾ ಎಐಜಿ ವಿಮಾ ಸಂಸ್ಥೆ ಆಯ್ಕೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ಟಾಟಾ ಎಐಜಿ ಸಂಸ್ಥೆಯನ್ನು ಯೋಜನೆಯ ಅನುಷ್ಠಾನಕ್ಕಾಗಿ ವಿಮಾ ಸಂಸ್ಥೆಯಾಗಿ ಆಯ್ಕೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಿತ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

The Karnataka Government has opened registration for the Weather-Based Crop Insurance Scheme for the 2026–27 Kharif and Hingaru seasons. In Dakshina Kannada district, arecanut and black pepper have been notified under the scheme. Farmers can register through banks, CSCs, or Grama One centres until July 31, 2026. The farmer premium is ₹6,400 per hectare for arecanut and ₹2,350 per hectare for black pepper.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ
ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror