ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಆಸಕ್ತಿ ಮತ್ತು ಸತತ ಪ್ರಯತ್ನದ ಫಲವಾಗಿ, ಇಸ್ರೇಲ್ ಸರ್ಕಾರದ ‘ಮಾಶಾವ್’ (MASHAV) ಕಾರ್ಯಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯ ಮೂಲಕ ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ಇಸ್ರೇಲ್‌ನೊಂದಿಗೆ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆ ಇಡಲಾಗಿದೆ.
ಅನಂತಾಡಿಯ ದ.ಕ.ಜಿ.ಪಂ. ಶಾಲೆಯಲ್ಲಿ ಜರುಗಿದ ವಿಶೇಷ ಕಾರ್ಯಕ್ರಮದಲ್ಲಿ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್ ಅವರು ಸ್ಮಾರ್ಟ್ ಬೋರ್ಡ್‌ಗಳನ್ನು ಲೋಕಾರ್ಪಣೆಗೊಳಿಸಿದರು. ಸಂಸದನಾಗಿ ಅಧಿಕಾರ ಸ್ವೀಕರಿಸಿದ ಆರಂಭಿಕ ದಿನಗಳಲ್ಲೇ ಕ್ಯಾ. ಬ್ರಿಜೇಶ್ ಚೌಟ ಅವರು ಇಸ್ರೇಲ್ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದು, ಕೃಷಿ ಮತ್ತು ಶಿಕ್ಷಣದಲ್ಲಿ ವಿಶ್ವಮಟ್ಟದ ತಂತ್ರಜ್ಞಾನ ಹೊಂದಿರುವ ಇಸ್ರೇಲ್‌ನ ಸಹಕಾರವನ್ನು ಜಿಲ್ಲೆಗೆ ತರುವ ಗುರಿಯೊಂದಿಗೆ ಈ ಯೋಜನೆ ಅನುಷ್ಠಾನಗೊಂಡಿದೆ.
ಡಿಜಿಟಲ್ ಶಿಕ್ಷಣಕ್ಕೆ ಹೊಸ ವೇಗ : ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಬಳಿಕ ಮಾತನಾಡಿದ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್,
“ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಕೈಜೋಡಿಸುತ್ತಿರುವುದು ಸಂತಸದ ವಿಷಯ. ಸ್ಮಾರ್ಟ್ ಬೋರ್ಡ್‌ಗಳ ಮೂಲಕ ಡಿಜಿಟಲ್ ಶಿಕ್ಷಣಕ್ಕೆ ಹೊಸ ವೇಗ ಸಿಗಲಿದೆ. ವ್ಯಾಪಾರ ಮತ್ತು ಸಾಂಸ್ಕೃತಿಕವಾಗಿ ಇಸ್ರೇಲ್ ಹಾಗೂ ದಕ್ಷಿಣ ಕನ್ನಡದ ನಡುವಿನ ಸಂಬಂಧ ಮುಂದಿನ ದಿನಗಳಲ್ಲಿ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಜಾಗತಿಕ ಸಹಕಾರವನ್ನು ಸ್ಥಳೀಯ ಅಭಿವೃದ್ಧಿಗೆ : ಈ ಸಂದರ್ಭ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, “ಭಾರತ ಮತ್ತು ಇಸ್ರೇಲ್ ರಾಷ್ಟ್ರಗಳ ನಡುವೆ ದೀರ್ಘಕಾಲದ ಸ್ನೇಹ ಸಂಬಂಧವಿದೆ. ವಿಶೇಷವಾಗಿ ಕೃಷಿ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ನಾವು ಉತ್ತಮ ಸಹಯೋಗ ಹೊಂದಿದ್ದೇವೆ. ಸಂಸದನಾಗಿ ಅಧಿಕಾರ ವಹಿಸಿಕೊಂಡ ಆರಂಭದ ದಿನಗಳಲ್ಲೇ ಜಾಗತಿಕ ಸಹಕಾರವನ್ನು ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂಬ ಗುರಿ ಹೊಂದಿದ್ದೆ. ಅದರ ಮೊದಲ ಹೆಜ್ಜೆಯಾಗಿ ಇಂದು ಇಸ್ರೇಲ್ ಸರ್ಕಾರದ MASHAV ಕಾರ್ಯಕ್ರಮದ ಮೂಲಕ ಜಿಲ್ಲೆಯ ನಾಲ್ಕು ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ಹಸ್ತಾಂತರಿಸಲಾಗಿದೆ. ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಜಾಗತಿಕ ಮಟ್ಟಕ್ಕೆ ಏರಿಸಲಿದೆ” ಎಂದು ಹೇಳಿದರು.
ಈ ಮಹತ್ವದ ಸಹಕಾರಕ್ಕಾಗಿ ಭಾರತದ ಇಸ್ರೇಲ್ ರಾಯಭಾರಿ ರೆವೆನ್ ಅಜರ್ ಹಾಗೂ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್ ಅವರಿಗೆ ಜಿಲ್ಲೆಯ ಜನರ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ವ್ಯಾಪಾರ, ಕೃಷಿ ಸೇರಿದಂತೆ ಇಸ್ರೇಲ್ ಮಾದರಿಯ ನೂತನ ತಂತ್ರಜ್ಞಾನಗಳನ್ನು ಜಿಲ್ಲೆಗೆ ತರುವ ಪ್ರಯತ್ನ ಮುಂದುವರಿಯಲಿದೆ ಎಂದರು.
ಸ್ಮಾರ್ಟ್ ಬೋರ್ಡ್ ಪಡೆದ ಶಾಲೆಗಳು : ಈ ಯೋಜನೆಯಡಿ ಒಟ್ಟು ನಾಲ್ಕು ಶಾಲೆಗಳಿಗೆ ತಲಾ ₹3.5 ಲಕ್ಷ ಅನುದಾನದಲ್ಲಿ ಸ್ಮಾರ್ಟ್ ಬೋರ್ಡ್‌ಗಳನ್ನು ಒದಗಿಸಲಾಗಿದೆ.
ಅನಂತಾಡಿ ಬಂಟ್ರಿಂಜದ ದ.ಕ.ಜಿ.ಪಂ. ಪ್ರಾಥಮಿಕ ಶಾಲೆ
ವಿಟ್ಲದ ಮಾದರಿ ಹಿರಿಯ ಪ್ರಾಥಮಿಕ ಶಾಲೆ
ಸುಳ್ಯ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು
ಮಣ್ಣಗುಡ್ಡೆಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ
ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಅನಂತಾಡಿಯ ದ.ಕ.ಜಿ.ಪಂ. ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…
ಕರ್ನಾಟಕದ ಜಿಐ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ರಫ್ತು; ಭಾರತದ ಕೃಷಿ…
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡ ತಕ್ಷಣ ಉಂಟಾಗುವ ‘ಪ್ಯಾನಿಕ್ ಸೆಲ್ಲಿಂಗ್’ ರೈತರಿಗೆ…
ಅಡಿಕೆ ದರ ನಿರ್ಧಾರದಲ್ಲಿ ಸಹಕಾರಿ ಸಂಸ್ಥೆಯ ಪಾತ್ರ ಏನು? ಈ ಸಂದರ್ಭ ಕೈಗೊಳ್ಳಬೇಕಾದ…