Advertisement
ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

Share

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಉಷ್ಣಾಂಶವು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ತಿಳಿಸಿದ್ದಾರೆ.

ಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನತೆ ಸಡಿಲವಾದ ಉಡುಪುಗಳನ್ನು ಧರಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ. ಜೊತೆಗೆ ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ದಿನಪೂರ್ತಿ ಸಾಕಷ್ಟು ನೀರು ಕುಡಿಯಬೇಕು ಎಂದು ಸೂಚಿಸಿದ್ದಾರೆ.

ಬಿಸಿಲಿನಿಂದ ಸಾಧ್ಯವಾದಷ್ಟು ದೂರ ಇರಲು ಪ್ರಯತ್ನಿಸುವುದು, ವಿಶೇಷವಾಗಿ ಮಧ್ಯಾಹ್ನ ಸಮಯದಲ್ಲಿ ಹೊರಗಡೆ ಹೋಗುವುದನ್ನು ತಪ್ಪಿಸುವುದು ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ಮನೆಯಲ್ಲಿಯೇ ತಯಾರಿಸಿದ ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದ್ದು, ಹೊರಗಿನ ಪಾನೀಯಗಳ ಬಳಕೆಯನ್ನು ಕಡಿಮೆ ಮಾಡುವುದು ಉತ್ತಮ ಎಂದು ಅವರು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

With rising temperatures in Dakshina Kannada, District Health Officer Dr. H R Thimmayya has advised people to take precautions such as staying hydrated, wearing loose clothing, avoiding direct sun exposure, and consuming homemade drinks for better health.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

6 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

14 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

14 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

19 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

19 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

1 day ago