ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

August 2, 2026
7:24 AM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24 ಗಂಟೆಗಳ ಕಾಲ ಸನ್ನದ್ಧವಾಗಿರಲು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ಭೂಕುಸಿತ ಪ್ರದೇಶಗಳ ಮೇಲೆ ವಿಶೇಷ ನಿಗಾ ವಹಿಸುವಂತೆ ಆದೇಶಿಸಲಾಗಿದೆ.

ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ತಾಲೂಕು ಆಡಳಿತಗಳು ಸಂಪೂರ್ಣ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.

Advertisement

ಈ ಕುರಿತು ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿದ ಅವರು, ಮಳೆ ಅನಾಹುತಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಎಲ್ಲಾ ತಾಲೂಕು ಕಚೇರಿಗಳು ಹಾಗೂ ನಿಯಂತ್ರಣ ಕೊಠಡಿಗಳು (ಕಂಟ್ರೋಲ್ ರೂಂ) 24 ಗಂಟೆಗಳ ಕಾಲ ಸಾರ್ವಜನಿಕರ ಸೇವೆಗೆ ಲಭ್ಯವಾಗಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ಮಣ್ಣು ಜರಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಗುರುತಿಸಿರುವ ಅಪಾಯದ ಪ್ರದೇಶಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಅಪಾಯದ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಹೇಳಿದರು.

ಮಣ್ಣು ಜರಿಯುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮರಳು ಚೀಲಗಳನ್ನು ಅಳವಡಿಸಿ ತಾತ್ಕಾಲಿಕ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಜಮೀನುಗಳಲ್ಲಿಯೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪ್ರಾಕೃತಿಕ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ಚೆಕ್ ವಿತರಿಸಬೇಕು. ಮಳೆ ಅನಾಹುತದಿಂದ ಸ್ಥಳಾಂತರಗೊಂಡವರಿಗೆ ಅಗತ್ಯ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್‌ (SDRF) ಹಾಗೂ ಎನ್‌ಡಿಆರ್‌ಎಫ್‌ (NDRF) ತಂಡಗಳು ಯಾವಾಗಲೂ ತುರ್ತು ಕಾರ್ಯಾಚರಣೆಗೆ ಸಿದ್ಧವಾಗಿರಬೇಕು ಎಂದೂ ಅವರು ಸೂಚಿಸಿದರು.

ಚಾರ್ಮಾಡಿ, ಶಿರಾಡಿ ಹಾಗೂ ಸಂಪಾಜೆ ಘಾಟ್‌ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಭೂಕುಸಿತ ಅಥವಾ ಗುಡ್ಡ ಜರಿತ ಸಂಭವಿಸಿದರೆ ತಕ್ಷಣ ತೆರವು ಕಾರ್ಯಾಚರಣೆ ಕೈಗೊಳ್ಳಲು ಅಗತ್ಯ ಯಂತ್ರೋಪಕರಣ ಮತ್ತು ಮೂಲಸೌಕರ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

“ಇದುವರೆಗೆ ಜಿಲ್ಲೆಯಲ್ಲಿ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವಂತಹ ಯಾವುದೇ ಘಟನೆ ವರದಿಯಾಗಿಲ್ಲ,” ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Dakshina Kannada Deputy Commissioner Darshan H.V. has directed all departments to remain on 24×7 alert following forecasts of heavy rainfall. Officials have been instructed to monitor landslide-prone areas, relocate vulnerable families if required, keep control rooms operational round the clock, and ensure SDRF, NDRF and Fire Services remain ready for emergency response.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror