ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂತು : ಸಂತ್ರಸ್ತನ ಪತ್ನಿಗೆ ಕೆಲಸ ಹೋಯ್ತು : ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು

May 27, 2023
11:06 AM

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ  ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.

Advertisement
Advertisement

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.

ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror