ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.
ಅಲ್ಲದೆ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.
ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.
ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…