ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

August 8, 2026
6:26 AM
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಆಗಸ್ಟ್ 8ರಂದು ರಜೆ ಘೋಷಿಸಲಾಗಿದೆ. ಅಂಗನವಾಡಿ, 10ನೇ ತರಗತಿವರೆಗಿನ ಶಾಲೆಗಳು, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದ್ದು, ಈಗಾಗಲೇ ನಿಗದಿಯಾಗಿರುವ ಸಾರ್ವಜನಿಕ ಪರೀಕ್ಷೆಗಳು ನಡೆಯಲಿವೆ. ಕಾಸರಗೋಡಿನಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 8ರಂದು ನಾಲ್ಕು ತಾಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಕಾಸರಗೋಡು ಜಿಲ್ಲೆಯಲ್ಲೂ ಶಾಲೆಗೆ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗನವಾಡಿ ಮತ್ತು 10ನೇ ತರಗತಿವರೆಗಿನ ಎಲ್ಲಾ ಶಾಲೆಗಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಪರೀಕ್ಷೆಗಳಿಗೆ ವಿನಾಯಿತಿ : ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಶಾಲೆ-ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ನದಿ, ಹೊಳೆಗಳ ಬಳಿ ತೆರಳದಂತೆ ಎಚ್ಚರಿಕೆ : ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡದ ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಕಾಸರಗೋಡಿನಲ್ಲಿ ಭಾರೀ ಮಳೆ: ಆ.8ರಂದು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆಗಸ್ಟ್ 8ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕೇಂದ್ರ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯೊಂದಿಗೆ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಈ ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ನಿಗದಿಪಡಿಸಿರುವ ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ಅವುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Due to continued heavy rainfall in Dakshina Kannada, the district administration has declared a holiday on August 8 for Anganwadis, schools up to Class 10, PU colleges, ITIs and diploma colleges in Puttur, Belthangady, Sullia and Kadaba taluks. University and other public examinations already scheduled will continue as planned, while teachers and staff have been instructed to report for duty.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror