Advertisement
ಸುದ್ದಿಗಳು

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜುಲೈ 3, ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಿದ್ದು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನದಿ-ಹಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ರಸ್ತೆಗಳಿಗೆ ಹಾನಿ, ಗುಡ್ಡ ಕುಸಿತದ ಆತಂಕ ಹಾಗೂ ಜಲಾವೃತ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತ ಸಾರ್ವಜನಿಕರು ಅಗತ್ಯವಿಲ್ಲದಿದ್ದರೆ ಹೊರಗಡೆ ಸಂಚರಿಸದಂತೆ ಹಾಗೂ ನದಿ, ಹೊಳೆ, ಜಲಪಾತ ಮತ್ತು ಸಮುದ್ರ ತೀರ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ.


Due to continuous heavy rainfall and adverse weather conditions, the Dakshina Kannada district administration has declared a holiday for all schools and colleges on Friday, July 3, as a precautionary measure to ensure students’ safety.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

9 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

10 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

10 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

10 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

10 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago