ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

July 31, 2026
8:18 PM
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಆಗಸ್ಟ್‌ 1ರಂದು ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್‌ 1, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, 12ನೇ ತರಗತಿವರೆಗಿನ ಪದವಿಪೂರ್ವ (PU) ಕಾಲೇಜುಗಳಿಗೆ, ಹಾಗೂ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಸೂಚನೆಗಳು ಪಾಲನೆ ಕಡ್ಡಾಯ

  • ನದಿ, ಹಳ್ಳ, ಕೆರೆ ಸೇರಿದಂತೆ ಜಲಮೂಲಗಳ ಬಳಿ ಸಾರ್ವಜನಿಕರು ಹಾಗೂ ಮಕ್ಕಳು ಹೋಗದಂತೆ ಎಚ್ಚರಿಕೆ ವಹಿಸಲು ಸೂಚನೆ.
  • ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
  • ಜಿಲ್ಲೆಯಲ್ಲಿ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಮುಂದೂಡಲು ಅಥವಾ ಸುರಕ್ಷತಾ ಕ್ರಮಗಳೊಂದಿಗೆ ನಡೆಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
  • ಪ್ರಾಣಿಗಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
  • ಸಂಬಂಧಿತ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ 1077 (ಟೋಲ್ ಫ್ರೀ) ಅಥವಾ 0824-2442590 ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

Due to continuous heavy rainfall in Dakshina Kannada district, the Deputy Commissioner has declared a holiday on August 1, 2026, for all Anganwadis, schools, PU colleges (up to Class 12), ITIs, and Diploma colleges. The administration has also advised people to avoid rivers and water bodies, fishermen not to venture into the sea, and all departments to remain alert.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror