ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

July 23, 2026
7:29 AM
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಸಾರ್ವಜನಿಕರು ಮತ್ತು ಮೀನುಗಾರರು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಜುಲೈ 23ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ಆದೇಶವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಸೆಕ್ಷನ್ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲಾಡಳಿತದ ಪ್ರಮುಖ ಸೂಚನೆಗಳು

  • ಮಕ್ಕಳು ತಗ್ಗು ಪ್ರದೇಶ, ಜಲಾವೃತ ಪ್ರದೇಶ, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪೋಷಕರು ವಿಶೇಷ ಎಚ್ಚರಿಕೆ ವಹಿಸಬೇಕು.
  • ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು.
  • ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರ ಮತ್ತು ಸಮುದ್ರ ತೀರಗಳಿಗೆ ಭೇಟಿ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಇದ್ದು ವಿಪತ್ತು ನಿರ್ವಹಣಾ ಕರ್ತವ್ಯಗಳಿಗೆ ಸನ್ನದ್ಧರಾಗಿರಬೇಕು.
  • ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
  • ಪ್ರತಿ ತಾಲೂಕಿನಲ್ಲಿ ತುರ್ತು ಪರಿಸ್ಥಿತಿಗೆ ಅಗತ್ಯವಾದ ಕಾಳಜಿ ಕೇಂದ್ರಗಳನ್ನು ಸಿದ್ಧವಾಗಿರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ತುರ್ತು ಸಹಾಯವಾಣಿ : ನೈಸರ್ಗಿಕ ವಿಕೋಪ ಸಂಬಂಧಿತ ತುರ್ತು ನೆರವಿಗಾಗಿ ಸಾರ್ವಜನಿಕರು 1077 (ಟೋಲ್-ಫ್ರೀ) ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Dakshina Kannada Deputy Commissioner has declared a holiday on July 23 for all anganwadis, government, aided and private schools, residential schools, and PU colleges following the IMD’s Yellow Alert for heavy rainfall. The district administration has also issued safety advisories, prohibited visits to rivers and beaches, and urged fishermen not to venture into the sea.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror