ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

July 24, 2026
5:56 AM
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ ಮತ್ತು ಭಟ್ಕಳ ತಾಲೂಕಿನ ಶಾಲೆ-ಕಾಲೇಜುಗಳಿಗೂ ರಜೆ ನೀಡಲಾಗಿದೆ.

ಕರ್ನಾಟಕ ಕರಾವಳಿ ಭಾಗದಲ್ಲಿ ಮುಂದುವರಿದಿರುವ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಜುಲೈ 24) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅನಗತ್ಯವಾಗಿ ನದಿ, ಹೊಳೆ, ಜಲಪಾತ, ಕಡಲತೀರ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ. ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ ಮತ್ತು ಭಟ್ಕಳ ಮುಂತಾದ ತಾಲೂಕುಗಳು  ಶಾಲೆಗಳು ಹಾಗೂ ಕಾಲೇಜುಗಳಿಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಅಲ್ಲಿನ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಹಾಗೂ ಸುರಕ್ಷತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾಡಳಿತ ಸಾರ್ವಜನಿಕರು ಹವಾಮಾನ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ. ಅಗತ್ಯವಿಲ್ಲದಿದ್ದರೆ ಪ್ರವಾಸಿ ತಾಣಗಳು, ನದಿಪಾತ್ರಗಳು ಮತ್ತು ಅಪಾಯದ ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ.

Heavy rainfall and an IMD forecast have prompted the Dakshina Kannada district administration to declare a holiday on July 24 for all Anganwadis, schools, and PU colleges. A holiday has also been declared for schools and colleges in Joida taluk of Uttara Kannada as a precautionary measure.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror