Advertisement
ಸುದ್ದಿಗಳು

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ. ಅವರು ಆಗಸ್ಟ್‌ 4ರಂದು (ಮಂಗಳವಾರ) ದ ಕ ಜಿಲ್ಲೆಯ ಕೆಲವು ತಾಲೂಕಿನ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು (10ನೇ ತರಗತಿವರೆಗೆ) ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ಎಲ್ಲಾ ವಸತಿ ಶಾಲೆಗಳು ಹಾಗೂ ವಸತಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಜೆ ಆದೇಶವು ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತಿರುವುದು, ಹೊಳೆ-ನದಿಗಳ ನೀರಿನ ಮಟ್ಟ ಏರಿಕೆಯಾಗಿರುವುದು ಹಾಗೂ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಮುಂದುವರಿದಿದೆ. ಹವಾಮಾನ ಇಲಾಖೆ ಮುಂದುವರಿದ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ಜಿಲ್ಲಾಡಳಿತವು ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ, ನದಿ, ಹೊಳೆ ಹಾಗೂ ಪ್ರವಾಹಪೀಡಿತ ಪ್ರದೇಶಗಳ ಬಳಿ ಹೋಗದಂತೆ ಹಾಗೂ ಹವಾಮಾನ ಇಲಾಖೆಯ ಅಧಿಕೃತ ಮಾಹಿತಿಯನ್ನು ಗಮನಿಸುವಂತೆ ಮನವಿ ಮಾಡಿದೆ.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2026ರ ಆಗಸ್ಟ್ 4ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಆದರೆ ಪದವಿ ಪೂರ್ವ ಕಾಲೇಜುಗಳು (PU), ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ಮತ್ತು ಕೇಂದ್ರ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ನಿಕಟವರ್ತಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಆ.4 ರಜೆ ಘೋಷಿಸಿದ್ದಾರೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Due to continuous heavy rainfall, holidays have been declared on August 4 for schools and selected educational institutions in Dakshina Kannada, Udupi and Kasaragod. The extent of the holiday varies by district and taluk based on weather conditions and safety considerations.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

18 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

23 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

23 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago