ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

July 24, 2026
9:47 PM
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಶನಿವಾರ ಅಂದರೆ ಜುಲೈ 25ರಂದು ಎರಡೂ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಜೆಯನ್ನು ಜಿಲ್ಲಾಡಳಿತ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜುಲೈ 25 (ಶನಿವಾರ) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸಾರ್ವಜನಿಕರಿಗೆ ಎಚ್ಚರಿಕೆ :  ಜಿಲ್ಲಾಡಳಿತವು ಸಾರ್ವಜನಿಕರು ಅನಗತ್ಯವಾಗಿ ನದಿ, ಹೊಳೆ, ಸಮುದ್ರ ತೀರ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಸೂಚಿಸಿದೆ. ಭಾರೀ ಮಳೆ, ಭೂಕುಸಿತ ಹಾಗೂ ಮರಗಳು ಉರುಳುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.

ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಪರ್ಕಿಸಿ : ಮಳೆ ಸಂಬಂಧಿತ ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಸ್ಥಳೀಯ ಆಡಳಿತದ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Dakshina Kannada district administration has declared a holiday on July 25 for all Anganwadi centres, schools, PU colleges and degree colleges due to the forecast of heavy rainfall. The public has also been advised to remain alert and avoid vulnerable areas.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror