ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |

October 16, 2024
6:52 AM

ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ. ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರಕ್ಕೂ ಅಧಿಕ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದ್ದು, ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಮೂಡಿಗೆರೆ, ಆಲ್ದೂರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್‌ನಲ್ಲಿ ಮಂಜು ಮುಸುಕಿದ ವಾತಾವರಣವಿದೆ. ವಾಹನ ಸವಾರರು ಈ ಭಾಗಗಳಲ್ಲಿ ಜಾಗರೂಕತೆಯಿಂದ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ.  ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ  ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror