ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ. ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರಕ್ಕೂ ಅಧಿಕ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದ್ದು, ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಮೂಡಿಗೆರೆ, ಆಲ್ದೂರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್‌ನಲ್ಲಿ ಮಂಜು ಮುಸುಕಿದ ವಾತಾವರಣವಿದೆ. ವಾಹನ ಸವಾರರು ಈ ಭಾಗಗಳಲ್ಲಿ ಜಾಗರೂಕತೆಯಿಂದ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ. ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…