ರಾಜ್ಯದಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಶೇಕಡ 61ರಷ್ಟು ಹೆಚ್ಚಾದ ಪರಿಣಾಮ, 7 ಜಿಲ್ಲೆಗಳಲ್ಲಿ ವ್ಯಾಪಕ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದ್ದು, ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ, ಮೂರು ದಿನಗಳಲ್ಲಿ ಹಾನಿಯ ಸಮೀಕ್ಷಾ ವರದಿ ನೀಡಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ದಾವಣೆಗೆರೆ ಜಿಲ್ಲೆಯ ವಿವಿಧೆಡೆ ಪ್ರವಾಹಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ಅವರು, ರಾಜ್ಯದಲ್ಲಿ ಸುಮಾರು 1 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದ ಬೆಳೆ ಹಾನಿಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಲಿವೆ. ವರದಿ ಸರ್ಕಾರದ ಕೈ ಸೇರಿದ 15 ದಿನಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸುವುದಾಗಿ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳೆ ಹಾನಿ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಾಳೆ ವಿಡಿಯೋ ಸಂವಾದ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
The Revenue Minister, Krishna Bhairegowda, stated that the monsoon rains in the state exceeded the average by 61 percent, leading to significant crop and property damage in 7 districts.