ದೇಶದ ಎರಡನೇ ಹಾಗೂ ರಾಜ್ಯದ ಪ್ರಥಮ ಮೊಸಳೆ ಪಾರ್ಕ್ ದಾಂಡೇಲಪ್ಪ ದೇವಸ್ಥಾನದ ಎದುರು ಕಾಳಿ ನದಿ ತಟದಲ್ಲಿ ನಿರ್ಮಾಣಗೊಂಡಿದೆ.
ದಾಂಡೇಲಪ್ಪ ದೇವಸ್ಥಾನದ ಕಾಳಿ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುವುದರಿಂದ ಈ ಪ್ರದೇಶದಲ್ಲಿ ಮೊಸಳೆ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ. ಸುಮಾರು ಎರಡು ಎಕರೆ ಜಾಗದಲ್ಲಿ ಈ ಪಾರ್ಕ್ ನಿರ್ಮಾಣಗೊಂಡಿದೆ. ಮಾತ್ರವಲ್ಲ, ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಈ ಪಾರ್ಕ್ ನಿರ್ಮಿಸಲಾಗಿದೆ.
ಪ್ರಕೃತಿಯ ನಡುವೆ ಪ್ರವಾಸಿಗರು ನೆಮ್ಮದಿಯಾಗಿ ಕಾಲಕಳೆಯುವ ವಾತಾವರಣ ಇಲ್ಲಿ ಸೃಷ್ಟಿಸಲಾಗಿದೆ. ಮಾತ್ರವಲ್ಲದೆ ಈ ಪಾರ್ಕ್ ಪ್ರದೇಶದಲ್ಲಿ ಮೊಸಳೆ ಸೇರಿದಂತೆ ಕೆಲವು ಕಾಡು ಪ್ರಾಣಿಗಳ ಪ್ರತಿರೂಪಗಳನ್ನು ಸೃಷ್ಟಿಸಲಾಗಿದೆ. ಜತೆಗೆ, ಇಲ್ಲಿ ಮಕ್ಕಳ ಮೋಜಿಗೆ ಅಗತ್ಯವಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…