ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

February 7, 2025
7:21 AM

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಅರಿವು ಕೇಂದ್ರಗಳಲ್ಲಿ ವಿಶೇಷ ಚೇತನರಿಗೆ ಸ್ನೇಹಮಯಿ ಸಾಧನಗಳನ್ನು ವಿತರಿಸುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ 6 ಸಾವಿರ ಗ್ರಾಮ ಪಂಚಾಯತ್ ಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5 ಸಾವಿರದ 888 ಗ್ರಾಮ ಪಂಚಾಯತ್ ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5ಸಾವಿರದ 767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ, ಈ ಕೇಂದ್ರಗಳಲ್ಲಿ ʼಓದುವ ಬೆಳಕುʼ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಲ್ಲಿ ಸುಮಾರು 50 ಲಕ್ಷ  ಮಕ್ಕಳು ನೋಂದಾಯಿಸಲ್ಪಟ್ಟಿದ್ದಾರೆ ಎಂದೂ ಸಚಿವರು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror