ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅರಿವು ಕೇಂದ್ರಗಳಲ್ಲಿ ವಿಶೇಷ ಚೇತನರಿಗೆ ಸ್ನೇಹಮಯಿ ಸಾಧನಗಳನ್ನು ವಿತರಿಸುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ 6 ಸಾವಿರ ಗ್ರಾಮ ಪಂಚಾಯತ್ ಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5 ಸಾವಿರದ 888 ಗ್ರಾಮ ಪಂಚಾಯತ್ ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5ಸಾವಿರದ 767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ, ಈ ಕೇಂದ್ರಗಳಲ್ಲಿ ʼಓದುವ ಬೆಳಕುʼ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಲ್ಲಿ ಸುಮಾರು 50 ಲಕ್ಷ ಮಕ್ಕಳು ನೋಂದಾಯಿಸಲ್ಪಟ್ಟಿದ್ದಾರೆ ಎಂದೂ ಸಚಿವರು ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ…
ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ…