ತಂದೆಯ ಅಂತ್ಯಸಂಸ್ಕಾರ ಕಾರ್ಯ ನೆರವೇರಿಸಿದ ಇಬ್ಬರು ಹೆಣ್ಣು ಮಕ್ಕಳು |

October 15, 2022
9:48 PM

ಹೆಣ್ಣು ಮಕ್ಕಳಿಬ್ಬರು ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ಕಾರ್ಯವನ್ನು ನೆರವೇರಿಸಿದ ಘಟನೆ ತುಮಕೂರಿನಲ್ಲಿ  ನಡೆದಿದೆ. ಅನಾರೋಗ್ಯದಿಂದ ಗಂಗಾಧರ್‌ ಎಂಬವರು ಮೃತಪಟ್ಟಿದ್ದು, ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ.

ತುಮಕೂರಿನ ಚಿಕ್ಕಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಂಡಳಿಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಗಂಗಾಧರ್‌ ಎಂಬವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು.

ತಮ್ಮ ತಂದೆಯ ಆಸೆಯಂತೆ ತುಮಕೂರು ನಗರದ ಗಾರ್ಡನ್ ರಸ್ತೆಯ ಚಿತಾಗಾರದಲ್ಲಿ ಇಬ್ಬರು ಹೆಣ್ಣುಮಕ್ಕಳೇ ಅಂತ್ಯಸಂಸ್ಕಾರವನ್ನು ನೆರವೇರಿಸಿ ಎಲ್ಲಾ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಕೇವಲ ಗಂಡು ಮಕ್ಕಳು ಮಾತ್ರ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಲು ಅವಕಾಶ ಇದ್ದು, ಗಂಡು ಮಕ್ಕಳು ಇಲ್ಲದಿದ್ದಲ್ಲಿ  ಕುಟುಂಬಸ್ಥರಿಗೆ ಆ ಅವಕಾಶ ಸಿಗುತ್ತಿತ್ತು. ಇದೀಗ ಹೆಣ್ಣುಮಕ್ಕಳೇ ಅಂತಿಮ ವಿಧಿವಿಧಾನ ನೆರವೇರಿಸಿರುವುದು ವಿಶೇಷವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror