ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197 ಗ್ರಾಮಗಳನ್ನು ಗುರುತಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ದಾವಣಗೆರೆ ತಾಲೂಕಿನಲ್ಲಿ 73, ಹರಿಹರ-27, ಚನ್ನಗಿರಿ-11, ಹೊನ್ನಾಳಿ-29, ನ್ಯಾಮತಿ-18 ಮತ್ತು ಜಗಳೂರು ತಾಲೂಕಿನಲ್ಲಿ 38 ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿ ಪಟ್ಟಿ ಮಾಡಲಾಗಿದೆ ಎಂದರು. ಬಾಡಿಗೆ ಆಧಾರದ ಮೇಲೆ 126 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದ್ದು, 15 ನೇ ಹಣಕಾಸು ಸೇರಿದಂತೆ ವಿವಿಧ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel