#CrudeOilPrice | ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ | 1 ವರ್ಷದ ಬಳಿಕ ಕಚ್ಚಾ ತೈಲದ ದರ ಭಾರೀ ಏರಿಕೆ |

September 28, 2023
2:31 PM
ಕಚ್ಚಾ ತೈಲದ ಉತ್ಪಾದನೆ ಹಾಗೂ ರಫ್ತು ಕಡಿತವನ್ನು ಈ ವರ್ಷದ ಅಂತ್ಯದವರೆಗೆ ಮುಂದುವರಿಸಲು ರಷ್ಯಾ ಮತ್ತು ಸೌದಿ ಅರೇಬಿಯಾ ತೀರ್ಮಾನಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.

ಪೆಟ್ರೋಲ್‌ ಹಾಗೂ ಡೀಸೇಲ್‌ ಬೆಲೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿದೆ. ಯಾವ ಸರ್ಕಾರ ಬಂದ್ರು ಅದೇ ಕಥೆ. ಅಧಿಕಾರಕ್ಕೆ ಬರುವ ಮುಂಚೆ ಮಾತ್ರ ಘೋಷಣೆ ತೈಲ ಬೆಲೆ ಇಳಿಸುತ್ತೇವೆ ಅಂತ. ಆದ್ರೆ ಆಮೇಲೆ ಅದೇ ರಾಗ ಅದೇ ಹಾಡು. ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಇದೀಗ ಕಚ್ಚಾ ತೈಲದ ಉತ್ಪಾದನೆ ಹಾಗೂ ರಫ್ತು ಕಡಿತವನ್ನು ಈ ವರ್ಷದ ಅಂತ್ಯದವರೆಗೆ ಮುಂದುವರಿಸಲು ರಷ್ಯಾ ಮತ್ತು ಸೌದಿ ಅರೇಬಿಯಾ ತೀರ್ಮಾನಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.

ಭಾರತಕ್ಕೆ  ಪೂರೈಕೆ ಆಗುತ್ತಿರುವ ಬ್ರೆಂಟ್‌ ಕಚ್ಚಾ ತೈಲದ ಬೆಲೆ 1.05% ಏರಿಕೆಯಾಗಿದ್ದು ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ ಈಗ 97.56 ಡಾಲರ್‌ (ಅಂದಾಜು 8,110 ರೂ.) ತಲುಪಿದೆ. ಒಂದು ಬ್ಯಾರೆಲ್‌ ಅಮೆರಿಕದ ವೆಸ್ಟ್‌ ಟೆಕ್ಸಸ್‌ ಇಂಟರ್‌ಮಿಡಿಯೇಟ್‌ ತೈಲದ ಬೆಲೆ 95.03 ಡಾಲರ್‌ಗೆ (ಅಂದಾಜು 7,900 ರೂ.) ಏರಿಕೆಯಾಗಿದೆ. ಈ ಹಿಂದೆ ಆಗಸ್ಟ್‌ 2022ರಲ್ಲಿ 94.61 ಡಾಲರ್‌ಗೆ ತಲುಪಿತ್ತು.

ಎಷ್ಟು ಕಡಿತ? : ಒಪೆಕ್‌+ ಒಕ್ಕೂಟದಲ್ಲಿ ಅತಿ ಹೆಚ್ಚು ತೈಲ ಉತ್ಪಾದನೆ ಮಾಡುವ ಸೌದಿ ಅರೇಬಿಯಾ ಈ ವರ್ಷದ ಅಂತ್ಯದ ವರೆಗೆ 1 ದಶಲಕ್ಷ ಬಿಪಿಡಿ (ಬ್ಯಾರೆಲ್‌ ಪರ್‌ ಡೇ) ತೈಲವನ್ನು ಕಡಿತ ಮಾಡುವುದಾಗಿ ಹೇಳಿದೆ. ಈ ನಿರ್ಧಾರದಿಂದ ಸೌದಿ ಈಗ ಪ್ರತಿ ದಿನ 9 ದಶಲಕ್ಷ ಬಿಪಿಡಿ ತೈಲವನ್ನು ಉತ್ಪಾದನೆ ಮಾಡುತ್ತಿದೆ. ರಷ್ಯಾವೂ ಈ ವರ್ಷದ ಅಂತ್ಯದವರೆಗೆ 3 ಲಕ್ಷ ಬಿಪಿಡಿ ತೈಲವನ್ನು ಕಡಿತ ಮಾಡುವುದಾಗಿ ಘೋಷಿಸಿದೆ. ಭಾರತಕ್ಕೆ ಪೂರೈಕೆಯಾಗುವ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಆಗಸ್ಟ್‌ನಲ್ಲಿ ಸರಾಸರಿ 86.43 ಡಾಲರ್ ಇದ್ದರೆ ಈಗ ಇದು 97 ಡಾಲರ್‌ ಗಡಿಯನ್ನು ದಾಟಿದೆ. ಮೇ ಮತ್ತು ಜೂನ್‌ನಲ್ಲಿ ಸರಾಸರಿ ಬೆಲೆಯು 73ರಿಂದ 75 ಡಾಲರ್ ನಡುವೆ ಇತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror