ಪೆಟ್ರೋಲ್ ಹಾಗೂ ಡೀಸೇಲ್ ಬೆಲೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿದೆ. ಯಾವ ಸರ್ಕಾರ ಬಂದ್ರು ಅದೇ ಕಥೆ. ಅಧಿಕಾರಕ್ಕೆ ಬರುವ ಮುಂಚೆ ಮಾತ್ರ ಘೋಷಣೆ ತೈಲ ಬೆಲೆ ಇಳಿಸುತ್ತೇವೆ ಅಂತ. ಆದ್ರೆ ಆಮೇಲೆ ಅದೇ ರಾಗ ಅದೇ ಹಾಡು. ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಇದೀಗ ಕಚ್ಚಾ ತೈಲದ ಉತ್ಪಾದನೆ ಹಾಗೂ ರಫ್ತು ಕಡಿತವನ್ನು ಈ ವರ್ಷದ ಅಂತ್ಯದವರೆಗೆ ಮುಂದುವರಿಸಲು ರಷ್ಯಾ ಮತ್ತು ಸೌದಿ ಅರೇಬಿಯಾ ತೀರ್ಮಾನಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.
ಭಾರತಕ್ಕೆ ಪೂರೈಕೆ ಆಗುತ್ತಿರುವ ಬ್ರೆಂಟ್ ಕಚ್ಚಾ ತೈಲದ ಬೆಲೆ 1.05% ಏರಿಕೆಯಾಗಿದ್ದು ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ ಈಗ 97.56 ಡಾಲರ್ (ಅಂದಾಜು 8,110 ರೂ.) ತಲುಪಿದೆ. ಒಂದು ಬ್ಯಾರೆಲ್ ಅಮೆರಿಕದ ವೆಸ್ಟ್ ಟೆಕ್ಸಸ್ ಇಂಟರ್‌ಮಿಡಿಯೇಟ್ ತೈಲದ ಬೆಲೆ 95.03 ಡಾಲರ್‌ಗೆ (ಅಂದಾಜು 7,900 ರೂ.) ಏರಿಕೆಯಾಗಿದೆ. ಈ ಹಿಂದೆ ಆಗಸ್ಟ್ 2022ರಲ್ಲಿ 94.61 ಡಾಲರ್‌ಗೆ ತಲುಪಿತ್ತು.
ಎಷ್ಟು ಕಡಿತ? : ಒಪೆಕ್+ ಒಕ್ಕೂಟದಲ್ಲಿ ಅತಿ ಹೆಚ್ಚು ತೈಲ ಉತ್ಪಾದನೆ ಮಾಡುವ ಸೌದಿ ಅರೇಬಿಯಾ ಈ ವರ್ಷದ ಅಂತ್ಯದ ವರೆಗೆ 1 ದಶಲಕ್ಷ ಬಿಪಿಡಿ (ಬ್ಯಾರೆಲ್ ಪರ್ ಡೇ) ತೈಲವನ್ನು ಕಡಿತ ಮಾಡುವುದಾಗಿ ಹೇಳಿದೆ. ಈ ನಿರ್ಧಾರದಿಂದ ಸೌದಿ ಈಗ ಪ್ರತಿ ದಿನ 9 ದಶಲಕ್ಷ ಬಿಪಿಡಿ ತೈಲವನ್ನು ಉತ್ಪಾದನೆ ಮಾಡುತ್ತಿದೆ. ರಷ್ಯಾವೂ ಈ ವರ್ಷದ ಅಂತ್ಯದವರೆಗೆ 3 ಲಕ್ಷ ಬಿಪಿಡಿ ತೈಲವನ್ನು ಕಡಿತ ಮಾಡುವುದಾಗಿ ಘೋಷಿಸಿದೆ. ಭಾರತಕ್ಕೆ ಪೂರೈಕೆಯಾಗುವ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಆಗಸ್ಟ್‌ನಲ್ಲಿ ಸರಾಸರಿ 86.43 ಡಾಲರ್ ಇದ್ದರೆ ಈಗ ಇದು 97 ಡಾಲರ್ ಗಡಿಯನ್ನು ದಾಟಿದೆ. ಮೇ ಮತ್ತು ಜೂನ್‌ನಲ್ಲಿ ಸರಾಸರಿ ಬೆಲೆಯು 73ರಿಂದ 75 ಡಾಲರ್ ನಡುವೆ ಇತ್ತು.
– ಅಂತರ್ಜಾಲ ಮಾಹಿತಿ
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…