ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರ ಶೀಘ್ರದಲ್ಲೇ ಆರಂಭ | ಸಚಿವ ದಿನೇಶ್ ಗುಂಡೂರಾವ್

October 6, 2024
5:30 PM

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿಂದು ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಅಲ್ಲಿನ ಸೌಲಭ್ಯವನ್ನು ವೀಕ್ಷಿಸಿದರು.ಈ ವೇಳೆ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್. ಪುಟ್ಟಸ್ವಾಮಿ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಅಗತ್ಯವಿರುವ ಕಿಮೋ ಥೆರಪಿಗೆ ಹೆಚ್ಚಿನ ಬೇಡಿಕೆ ಇದ್ದು, ಬಡವರು ಹಾಗೂ ಸಾಮಾನ್ಯ ರೋಗಿಗಳು ದುಬಾರಿ ವೆಚ್ಚವನ್ನು ಭರಿಸಲು ಪಡದಾಡುವ ಹಿನ್ನೆಲೆಯಲ್ಲಿ ಅವರಿಗೆ ಅನುಕೂಲ  ಮಾಡಿಕೊಡುವ ನಿಟ್ಟಿನಲ್ಲಿ  ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ನಟ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಆರಂಭಿಸಿರುವ ಹೃದಯ ಜ್ಯೋತಿ ಯೋಜನೆಯಡಿ ಸದ್ಯ 75ಕ್ಕೂ ಹೆಚ್ಚು ಜನರ ಜೀವ ಉಳಿಸಿದ್ದು , 1 ಸಾವಿರದ 200ಕ್ಕೂ ಹೆಚ್ಚು ಜನರು ಹೃದಯ ಸಮಸ್ಯೆಗೆ  ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?
May 16, 2026
7:27 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 15-05-2026 | ಮೇ 19ರವರೆಗೆ ಕರ್ನಾಟಕದಲ್ಲಿ ಗುಡುಗು-ಮಳೆ ಮುಂದುವರಿಕೆ – ಮುಂಗಾರು ಪ್ರವೇಶ ಮತ್ತೆ ವಿಳಂಬವಾಗುವ ಸೂಚನೆ
May 15, 2026
2:57 PM
by: ಸಾಯಿಶೇಖರ್ ಕರಿಕಳ
ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror