ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿಂದು ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಅಲ್ಲಿನ ಸೌಲಭ್ಯವನ್ನು ವೀಕ್ಷಿಸಿದರು.ಈ ವೇಳೆ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್. ಪುಟ್ಟಸ್ವಾಮಿ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಅಗತ್ಯವಿರುವ ಕಿಮೋ ಥೆರಪಿಗೆ ಹೆಚ್ಚಿನ ಬೇಡಿಕೆ ಇದ್ದು, ಬಡವರು ಹಾಗೂ ಸಾಮಾನ್ಯ ರೋಗಿಗಳು ದುಬಾರಿ ವೆಚ್ಚವನ್ನು ಭರಿಸಲು ಪಡದಾಡುವ ಹಿನ್ನೆಲೆಯಲ್ಲಿ ಅವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ನಟ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಆರಂಭಿಸಿರುವ ಹೃದಯ ಜ್ಯೋತಿ ಯೋಜನೆಯಡಿ ಸದ್ಯ 75ಕ್ಕೂ ಹೆಚ್ಚು ಜನರ ಜೀವ ಉಳಿಸಿದ್ದು , 1 ಸಾವಿರದ 200ಕ್ಕೂ ಹೆಚ್ಚು ಜನರು ಹೃದಯ ಸಮಸ್ಯೆಗೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…