ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

May 4, 2025
10:37 PM

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಉಪಮುಖ್ಯಮಂತ್ರಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.

Advertisement

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ  ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ‌ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.

665.75 ಕೋಟಿ ಹಣವನ್ನು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ ಹಿರೇಕೌಂಶಿ ಮತ್ತು ಇತರೇ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ನಾವು ಮಾಡುತ್ತಿದ್ದೇವೆ. 2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.  ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ ಎಂದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror