ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಉಪಮುಖ್ಯಮಂತ್ರಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.
665.75 ಕೋಟಿ ಹಣವನ್ನು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ ಹಿರೇಕೌಂಶಿ ಮತ್ತು ಇತರೇ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ನಾವು ಮಾಡುತ್ತಿದ್ದೇವೆ. 2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು. ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ ಎಂದರು.
ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…