ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

January 30, 2026
7:27 AM

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ  ದರ್ಶನ್ ಹೆಚ್ ವಿ   ಸೂಚಿಸಿದ್ದಾರೆ.

Advertisement
Advertisement

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಜಿಲ್ಲೆಯ ಕುಡಿಯುವ ನೀರಿನ ಸಮಗ್ರ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ  ನಗರ ಸ್ಥಳೀಯ   ವಾರ್ಡುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು  ಪೂರೈಕೆಗೆ ಯಾವುದೇ ಅಡಚಣೆಯಾಗದಂತೆ  ಹಾಗೂ ನೀರಿನ ಕೊರತೆಯಾಗದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ  ತಕ್ಷಣವೇ ಯೋಜನೆ ರೂಪಿಸಿ ಸಿದ್ಧಗೊಂಡಿರಬೇಕು. ಲಭ್ಯವಿರುವ ನೀರಿನ ಮೂಲಗಳನ್ನು ಗುರುತಿಸಿ ಅಗತ್ಯ ಸಂದರ್ಭದಲ್ಲಿ ನೀರು ಪೂರೈಕೆ ಆಗುವಂತೆ  ಗಮನಹರಿಸಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲಾ 14 ನಗರ ಸ್ಥಳೀಯ ಸಂಸ್ಥೆಗಳು  ಮತ್ತು ಗ್ರಾಮ ಪಂಚಾಯತ್‍ಗಳಲ್ಲಿ ನೀರಿನ ಮೂಲ ವಿತರಣಾ ಜಾಲವನ್ನು  ಆಗ್ಗಿಂದಾಗೆ ಅಧಿಕಾರಿಗಳು ಖುದ್ದು ಮೇಲ್ವಿಚಾರಣೆ ನಡೆಸಬೇಕು. ಅವಶ್ಯಕತೆ ಇದ್ದಲ್ಲಿ ಮಾತ್ರ ನೀರು ಒದಗಿಸಲು ಟ್ಯಾಂಕರ್‍ಗಳನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ನೀರು ಒದಗಿಸಲು ತಮ್ಮಲ್ಲಿ ಲಭ್ಯವಿರುವ  ಅನುದಾನ ಬಳಸಿಕೊಳ್ಳಬೇಕು ಎಂದರು.  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು,  ತುಂಬೆಯಿಂದ ನೇತ್ರಾವತಿ ನೀರು ಪೂರೈಕೆ ಜಾಲದಲ್ಲಿ ಕೆಲವೆಡೆ ಅನಧಿಕೃತ ಸಂಪರ್ಕ ಪಡೆದಿರುವ ಬಗ್ಗೆ ಕೂಡಲೇ ಕ್ರಮ ವಹಿಸಿ,  ಸಂಬಂಧಿಸಿದ ಗ್ರಾಮ ಪಂಚಾಯತ್‍ಗಳೊಂದಿಗೆ ಒಪ್ಪಂದ ಮಾಡಿಕೊಂಡು ಶುಲ್ಕ ಪಡೆಯುವಂತೆ ತಿಳಿಸಿದರು.
ತುಂಬೆ ನೇತ್ರಾವತಿ ಡ್ಯಾಮ್ ನಲ್ಲಿ ಮಹಾನಗರ ಪಾಲಿಕೆ ಸೇರಿದಂತೆ  ವಿವಿಧ ಇಲಾಖೆ ಹಾಗೂ ಕೈಗಾರಿಕೆಗಳ ಒಟ್ಟು 7 ಜಾಕ್‍ವೆಲ್‍ಗಳು  ಕಾರ್ಯನಿರ್ವಹಿಸುತ್ತಿದೆ ಎಂದು  ನಗರಪಾಲಿಕೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಪ್ರಸ್ತುತ ನೇತ್ರಾವತಿ ಡ್ಯಾಮ್‍ನಲ್ಲಿ ಲಭ್ಯವಿರುವ ನೀರು ಮುಂದಿನ ಬೇಸಿಗೆಯಲ್ಲಿ   ಕುಡಿಯುವ ನೀರಿನ ನಿರ್ವಹಣೆಗೆ  ಈಗಿನ ಅಂದಾಜಿನಂತೆ ಸಾಕಾಗಲಿದೆ  ಎಂದು ತಿಳಿಸಿದರು.  ಕುಡಿಯುವ ನೀರಿನ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ  ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್‍ಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಸಭೆಗೆ ಸಮರ್ಪಕ ಮಾಹಿತಿ ಒದಗಿಸದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ    ಆ್ಯಂಟನಿ ಮರಿಯಪ್ಪ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ  ಮತ್ತಿತರರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror