ಜನರಲ್ಲಿ ಭೀತಿ ಹುಟ್ಟಿಸಿದ ಮಾರಕ ಝಿಕಾ ವೈರಸ್‌ | ಕೇರಳ ನಂತರ ಚಿಕ್ಕಬಳ್ಳಾಪುರದಲ್ಲಿ ಪತ್ತೆ| ಆರೋಗ್ಯ ಇಲಾಖೆಯಿಂದ ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ |

November 2, 2023
12:41 PM
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ ವೈರಸ್‌ ಹಾವಳಿ ಏನೋ ನಿಂತಿದೆ. ಆದರೆ ಅದರ ಭಯ ಇನ್ನೂ ಹಾಗೆ ಇದೆ. ಅದರ ವಿವಿಧ ರೂಪಾಂತರ ತಳಿಗಳು ಹಾಗೆ ಬಂದು ಜನರನ್ನು ಹೆದರಿಸಿ ಹೋಗುತ್ತಿದ್ದಾವೆ. ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ (Zika Virus) ಇದೀಗ ಚಿಕ್ಕಬಳ್ಳಾಪುರದಲ್ಲಿ (Chikkaballapur) ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.

Advertisement
Advertisement
Advertisement
Advertisement

ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health  Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ವಡ್ಡಹಳ್ಳಿ, ಬಚ್ಚಹಳ್ಳಿ ಗ್ರಾಮದ 880 ಮನೆಗಳಲ್ಲಿ ಸರಿಸುಮಾರು 4,800 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ.  ಈಗಾಗಲೇ 30 ಮಂದಿ ಗರ್ಭಿಣಿಯರು ಹಾಗೂ ಜ್ವರದಿಂದ ಬಳಲುತ್ತಿರುವ 3 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ. ಇದುವರೆಗೂ ಮನುಷ್ಯರಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಝಿಕಾ ವೈರಸ್ ಪತ್ತೆಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

Advertisement

ಝಿಕಾ ವೈರಸ್ ರೋಗ ಲಕ್ಷಣಗಳು: ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು.

The Zika virus, which was detected in Kozhikode, Kerala a few days ago and caused concern among the locals, has now been detected in Chikkaballapur. The health department is on high alert. When mosquitoes were tested in Talakayalabetta village of Shidlaghatta taluk of Chikkaballapur district, the presence of Zika virus was confirmed in mosquitoes.
- ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror