ವಿದ್ಯುತ್ ಸ್ಪರ್ಶದಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಸಾವು | ತನಿಖೆಗೆ ಅರಣ್ಯ ಸಚಿವ ಖಂಡ್ರೆ ಸೂಚನೆ

June 12, 2024
12:34 PM

ಇತ್ತೀಚೆಗೆ ಪ್ರಾಣಿಗಳು(Animal) ಕ್ಷುಲ್ಲಕ ಕಾರಣಕ್ಕೆ ಬಲಿಯಾಗುತ್ತಿವೆ(Death). ಅದರಲ್ಲೂ ಆನೆಗಳ(Elephant) ಸಾವು ಮೇಲಿಂದ ಮೇಲೆ ಸಂಭವಿಸುತ್ತಿದೆ. ಅನೇಕ ಕಾರಣಗಳು ಮನುಷ್ಯರ(Human beings) ನಿರ್ಲಕ್ಷ್ಯವೇ ಆಗಿರುತ್ತದೆ. ಇದೀಗ ಎರಡು ಬಾರಿ ನಾಡಹಬ್ಬ ದಸರಾ(Dasara) ಮಹೋತ್ಸವದಲ್ಲಿ ಭಾಗವಹಿಸಿದ್ದ ‘ಅಶ್ವತ್ಥಾಮ’ ಆನೆ ವಿದ್ಯುತ್‌ ಸ್ವರ್ಶದಿಂದ ಸಾವನ್ನಪ್ಪಿರುವ ಘಟನೆ ಮೈಸೂರು(Mysure) ಜಿಲ್ಲೆಯ ಭೀಮನಕಟ್ಟೆ ಆನೆ ಶಿಬಿರದ ಬಳಿ ನಡೆದಿದೆ.

Advertisement

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮನನ್ನು ಸಾಕಾನೆ ಕಟ್ಟಿಹಾಕುವ ಜಾಗದಲ್ಲಿ ಕಟ್ಟಲಾಗಿತ್ತು. ಮಂಗಳವಾರ (ಜೂನ್​ 11)ರ ಬೆಳಗ್ಗೆ 5:30ಕ್ಕೆ ಸಿಬ್ಬಂದಿ ಎಬ್ಬಿಸಲು ಹೋದಾಗ ಆನೆ ಮೃತಪಟ್ಟಿರುವುದು ಗೊತ್ತಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ನೋಡಿದಾಗ ಆನೆಯ ಬೆನ್ನಿನ ಮೇಲೆ ಸೋಲಾರ ತಂತಿ ಬಿದ್ದು, ಶಾಕ್​ ತಗುಲಿರುವುದರಿಂದ ಸಾವನ್ನಪ್ಪಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಇದನ್ನು ಸೆರೆ ಹಿಡಿಯಲಾಗಿತ್ತು. 4 ವರ್ಷಗಳ ಕಾಲ ಪಳಗಿಸಿದ ಬಳಿಕ 2021 ಹಾಗೂ 2022ರಲ್ಲಿ ಮೈಸೂರು ದಸರಾದ ಗಜ ಪಯಣದಲ್ಲಿ ಹೆಜ್ಜೆ ಹಾಕಿತ್ತು. ಶಾಂತ ಸ್ವಭಾವ ಹಾಗೂ ಗಾಂಭೀರ್ಯಕ್ಕೆ ಅಶ್ವತ್ಥಾಮ ಹೆಸರುವಾಸಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆನೆಯ ಮಾದರಿ ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತನಿಖೆ ನಡೆಸಿ, ವರದಿ ನೀಡಲು ಸಚಿವ ಖಂಡ್ರೆ ಸೂಚನೆ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಶ್ವತ್ಥಾಮ (38) ಆನೆಯ ನಿಧನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.ದಸರಾ ಮಹೋತ್ಸವದಲ್ಲಿ 2 ಬಾರಿ ಭಾಗಿಯಾಗಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿದ್ದ ಅಶ್ವತ್ಥಾಮ ಸೌರ ವಿದ್ಯುತ್ ಬೇಲಿ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಈ ಆಕಸ್ಮಿಕ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group