ಇತ್ತೀಚೆಗೆ ಪ್ರಾಣಿಗಳು(Animal) ಕ್ಷುಲ್ಲಕ ಕಾರಣಕ್ಕೆ ಬಲಿಯಾಗುತ್ತಿವೆ(Death). ಅದರಲ್ಲೂ ಆನೆಗಳ(Elephant) ಸಾವು ಮೇಲಿಂದ ಮೇಲೆ ಸಂಭವಿಸುತ್ತಿದೆ. ಅನೇಕ ಕಾರಣಗಳು ಮನುಷ್ಯರ(Human beings) ನಿರ್ಲಕ್ಷ್ಯವೇ ಆಗಿರುತ್ತದೆ. ಇದೀಗ ಎರಡು ಬಾರಿ ನಾಡಹಬ್ಬ ದಸರಾ(Dasara) ಮಹೋತ್ಸವದಲ್ಲಿ ಭಾಗವಹಿಸಿದ್ದ ‘ಅಶ್ವತ್ಥಾಮ’ ಆನೆ ವಿದ್ಯುತ್ ಸ್ವರ್ಶದಿಂದ ಸಾವನ್ನಪ್ಪಿರುವ ಘಟನೆ ಮೈಸೂರು(Mysure) ಜಿಲ್ಲೆಯ ಭೀಮನಕಟ್ಟೆ ಆನೆ ಶಿಬಿರದ ಬಳಿ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮನನ್ನು ಸಾಕಾನೆ ಕಟ್ಟಿಹಾಕುವ ಜಾಗದಲ್ಲಿ ಕಟ್ಟಲಾಗಿತ್ತು. ಮಂಗಳವಾರ (ಜೂನ್ 11)ರ ಬೆಳಗ್ಗೆ 5:30ಕ್ಕೆ ಸಿಬ್ಬಂದಿ ಎಬ್ಬಿಸಲು ಹೋದಾಗ ಆನೆ ಮೃತಪಟ್ಟಿರುವುದು ಗೊತ್ತಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ನೋಡಿದಾಗ ಆನೆಯ ಬೆನ್ನಿನ ಮೇಲೆ ಸೋಲಾರ ತಂತಿ ಬಿದ್ದು, ಶಾಕ್ ತಗುಲಿರುವುದರಿಂದ ಸಾವನ್ನಪ್ಪಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ತನಿಖೆ ನಡೆಸಿ, ವರದಿ ನೀಡಲು ಸಚಿವ ಖಂಡ್ರೆ ಸೂಚನೆ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಶ್ವತ್ಥಾಮ (38) ಆನೆಯ ನಿಧನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.ದಸರಾ ಮಹೋತ್ಸವದಲ್ಲಿ 2 ಬಾರಿ ಭಾಗಿಯಾಗಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿದ್ದ ಅಶ್ವತ್ಥಾಮ ಸೌರ ವಿದ್ಯುತ್ ಬೇಲಿ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಈ ಆಕಸ್ಮಿಕ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…