ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ ಈ ಬಗ್ಗೆ ವಾಗ್ವಾದ ನಡೆಸುತ್ತಿದ್ದಾರೆ. ಹೈನುಗಾರರಿಗೆ ಈ ಏರಿಕೆಯಿಂದ ಲಾಭವಾಗುತ್ತದಾ ಎನ್ನುವುದು ಪ್ರಶ್ನೆ. ಈಗಾಗಲೇ ಹಿಂಡಿ, ಮೇವು ದರ ಏರಿಕೆಯಾಗಿದೆ. ಹೈನುಗಾರರಿಗೆ ಹಾಲಿನ ಉತ್ಪನ್ನಗಳ ಮಾರಾಟದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಹೀಗಾಗಿ ಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ.…..ಮುಂದೆ ಓದಿ….
ದಿನದಿಂದ ದಿನಕ್ಕೆ ಹೈನುಗಾರಿಕೆಯಲ್ಲಿ ಪಶುಸಾಕಾಣಿಕೆಯಲ್ಲಿ ಆರ್ಥಿಕ ಹೊರೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದೆ ಎಂದು ಹೈನುಗಾರರು ಸ್ವಾಗತಿಸಿದ್ದಾರೆ. ಆದರೆ ದರ ಏರಿಕೆಯ ಬಗ್ಗೆ ಚರ್ಚೆಗಳು ಆರಂಭವಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈನುಗಾರರು ಬದುಕುವುದು ಬೇಡವೇ ಎಂದು ಪ್ರಶ್ನೆ ಮಾಡಿದ್ದಾರೆ. ಹಾಲಿನ ಬೆಲೆ ಹೆಚ್ಚಳ ಮಾಡಿದ ಕೂಡಲೇ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಹೈನುಗಾರರು ಬದುಕುವುದು ಬೇಡವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲ ತಾಣದಲ್ಲಿ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. , ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ತಿಳಿಸಿದ್ದಾರೆ.