ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಶೇಕಡ 90 ರಷ್ಟು ಅಸಂಘಟಿತ ಕಾರ್ಮಿಕರಿದ್ದು, ಸಾಮಾಜಿಕ ಭದ್ರತೆ ಒದಗಿಸಲಾಗುತ್ತಿದೆ. ಉದ್ಯೋಗಕ್ಕಾಗಿ ವಲಸೆ ಬರುವ ಬೇರೆ ಜಿಲ್ಲೆಗಳ ಕಾರ್ಮಿಕರಿಗಾಗಿ ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel